ಯುಧಿಷ್ಠಿರ ಸಾಂತ್ವನ; ಅಶ್ವಮೇಧದ ಸೂಚನೆ
ಯುಧಿಷ್ಠಿರ ಸಾಂತ್ವನ; ಅಶ್ವಮೇಧದ ಸೂಚನೆ ಮಹಾಬಾಹು ಯುಧಿಷ್ಠಿರನು ಭೀಷ್ಮನಿಗೆ ಜಲತರ್ಪಣವನ್ನಿತ್ತು ರಾಜಾ ಧೃತರಾಷ್ಟ್ರನನ್ನು ಮುಂದೆಮಾಡಿಕೊಂಡು ವ್ಯಾಕುಲಚಿತ್ತನಾಗಿ ಗಂಗಾನದಿಯ ತಟವನ್ನೇರಿದನು. ಮೇಲೇರುತ್ತಲೇ ಕಣ್ಣೀರಿನವ್ಯಾಕುಲಕಣ್ಣುಗಳ ಆ ಮಹೀಪಾಲನು ಬೇಟೆಗಾರನಿಂದ ಹೊಡೆಯಲ್ಪಟ್ಟ ಆನೆಯಂತೆ ಗಂಗಾನದಿಯ ತೀರದಲ್ಲಿಯೇ ಬಿದ್ದುಬಿಟ್ಟನು. ಕುಸಿಯುತ್ತಿದ್ದ ಅವನನ್ನು ಕೃಷ್ಣನ ಹೇಳಿಕೆಯಂತೆ ಭೀಮನು ಹಿಡಿದುಕೊಂಡನು. ಪರಬಲಾರ್ದನ ಕೃಷ್ಣನು “ಹೀಗಾಗಬೇಡ!” ಎಂದು ಯುಧಿಷ್ಠಿರನಿಗೆ ಹೇಳಿದನು. ಆರ್ತನಾಗಿ ಪುನಃ ಪುನಃ ನಿಟ್ಟುಸಿರು ಬಿಡುತ್ತಾ ನೆಲದ ಮೇಲೆ ಬಿದ್ದ ಧರ್ಮಾತ್ಮ ಯುಧಿಷ್ಠಿರನನ್ನು ಪಾಂಡವರು ನೋಡಿದರು. ಸತ್ವವನ್ನು ಕಳೆದುಕೊಂಡು…