ಪರಶುರಾಮ
ಪರಶುರಾಮ ಪರಶುರಾಮನ ಈ ಕಥೆಯು ವ್ಯಾಸ ಮಹಾಭಾರತದ ಅರಣ್ಯಕ ಪರ್ವದ ತೀರ್ಥಯಾತ್ರಾ ಪರ್ವ (ಅಧ್ಯಾಯ ೧೧೫-೧೧೭) ದಲ್ಲಿ ಬರುತ್ತದೆ. ಯುಧಿಷ್ಠಿರನ ತೀರ್ಥಯಾತ್ರಾ ಸಮಯದಲ್ಲಿ ಈ ಕಥೆಯನ್ನು ರಾಜರ್ಷಿ ಅಕೃತವ್ರಣನು ಯುಧಿಷ್ಠಿರನಿಗೆ ಹೇಳಿದನು. ಕನ್ಯಕುಬ್ಜದಲ್ಲಿ ಗಾಧಿ ಎಂದು ಲೋಕದಲ್ಲಿ ವಿಶ್ರುತನಾದ ಮಹಾಬಲಿ ಮಹಾ ರಾಜನಿದ್ದನು. ಅವನು ವನವಾಸಕ್ಕೆ ಹೋದನು. ವನದಲ್ಲಿ ವಾಸಿಸುತ್ತಿರುವಾಗ ಅವನಿಗೆ ಅಪ್ಸರೆಯಂತಿರುವ ಕನ್ಯೆಯು ಜನಿಸಿದಳು. ಭಾರ್ಗವ ಋಚೀಕನು ಅವಳನ್ನು ವರಿಸಿದನು. ಆಗ ರಾಜನು ಆ ಸಂಶಿತವ್ರತ ಬ್ರಾಹ್ಮಣನಿಗೆ ಹೇಳಿದನು:…