ವ್ಯಾಸ
ವ್ಯಾಸ ವ್ಯಾಸನು ಮಹಾಭಾರತ ಕಥೆಯ ರಚಕ ಮತ್ತು ಆ ಕಥೆಯ ಮುಖ್ಯ ಪಾತ್ರನೂ ಹೌದು. ಅವನು ವಸಿಷ್ಠನ ಮೊಮ್ಮಗ ಪರಾಶರನಿಗೆ ಸತ್ಯವತಿಯಲ್ಲಿ ಹುಟ್ಟಿದ ಮಗ. ದಾಶರಾಜನ ಸಾಕುಮಗಳು ಸತ್ಯವತಿಯು ಬೆಸ್ತರೊಂದಿಗೆ ವಾಸಿಸುತ್ತಿದ್ದುದರಿಂದ ಕೆಲವು ಕಾಲದವರೆಗೆ ಮೀನಿನ ವಾಸನೆಯನ್ನು ಹೊಂದಿದ್ದಳು. ತಂದೆಯ ಶುಶ್ರೂಷೆ ಮಾಡಲೋಸುಗ ನದಿಯಲ್ಲಿ ದೋಣಿಯನ್ನು ನಡೆಸುತ್ತಿದ್ದ ಅವಳನ್ನು ಒಮ್ಮೆ ತೀರ್ಥಯಾತ್ರೆ ಮಾಡುತ್ತಾ ತಿರುಗುತ್ತಿದ್ದ ಪರಾಶರನು ನೋಡಿದನು. ಸಿದ್ಧರ ಮನವನ್ನೂ ಸೆಳೆಯುವ ಆ ಅತೀವ ರೂಪಸಂಪನ್ನೆಯನ್ನು ನೋಡಿದ ಆ ಧೀಮಂತ…